ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮೇಕೆದಾಟು ಯೋಜನೆಗೆ ಶೀಘ್ರ ಕೇಂದ್ರದ ಅನುಮೋದನೆ: ಮುಖ್ಯಮಂತ್ರಿ ವಿಶ್ವಾಸ

know_the_cm

(ಮೈಸೂರು), ಆಗಸ್ಟ್ 09, 2021

-ಮೇಕೆದಾಟು ಯೋಜನೆಯ ಡಿಪಿಆರ್ ಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಅನುಮೋದನೆ ದೊರೆಯುವ ವಿಶ್ವಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.

-ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

-ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಬಾರಿ ದೆಹಲಿಗೆ ತೆರಳಿದಾಗ ಈ ಯೋಜನೆಗೆ ಒಪ್ಪಿಗೆ ನೀಡುವುದಾಗಿ ಭರವಸೆ ದೊರೆತಿದೆ. ಇದಕ್ಕೆ ಕೆಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ. ಇದು ಪೂರ್ಣಗೊಂಡ ಕೂಡಲೇ ಕೇಂದ್ರದ ಒಪ್ಪಿಗೆ ದೊರೆಯುವ ವಿಶ್ವಾಸವಿದೆ.

-ಮತ್ತೊಮ್ಮೆ ಈ ಉದ್ದೇಶಕ್ಕಾಗಿಯೇ ದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ವಸ್ತುಸ್ಥಿತಿಯನ್ನು ವಿವರಿಸಲಾಗುವುದು. ಸುಪ್ರೀಂ ಕೋರ್ಟಿನ ಆದೇಶಗಳ ಕುರಿತು ಮನವರಿಕೆ ಮಾಡಿಕೊಡಲಾಗುವುದು.

-ಇದರೊಂದಿಗೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೆಹಲಿಯಲ್ಲಿ ವಕೀಲರ ತಂಡದೊಂದಿಗೆ ಸಭೆ ನಡೆಸಿ, ಕಾವೇರಿ ತೀರದಲ್ಲಿ ಹೆಚ್ಚುವರಿ ನೀರಿನ ಹಕ್ಕನ್ನು ಕಾನೂನು ಪ್ರಕಾರ ಪಡೆದುಕೊಳ್ಳುವ ಕುರಿತು ಸಹ ಚರ್ಚಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ 19 ಮುನ್ನೆಚ್ಚರಿಕೆ:

-ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಈ ಎಲ್ಲ ಜಿಲ್ಲೆಗಳಿಗೆ ತಾವು ಭೇಟಿ ನೀಡಲಿದ್ದು, ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಳೆದ ಬಾರಿ ಈ ಎರಡು ರಾಜ್ಯಗಳಿಂದ ಪ್ರಾರಂಭವಾದ ಎರಡನೇ ಅಲೆ ಇಡೀ ರಾಜ್ಯವನ್ನು ವ್ಯಾಪಿಸಿತ್ತು. ಈ ಬಾರಿ ಅದನ್ನು ತಡೆಗಟ್ಟಲು ಪೂರ್ವಭಾವಿಯಾಗಿಯೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

*************