ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಜ್ಯದಲ್ಲಿ ಅತ್ಯಾಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರದ ಬೆಂಬಲ - ಮುಖ್ಯಮಂತ್ರಿ

know_the_cm

(ಬೆಂಗಳೂರು), ಆಗಸ್ಟ್ 27, 2021

-ಉದ್ಯೋಗ ಸೃಜಿಸುವ ಆಭರಣ ಉದ್ದಿಮೆ ಕೌಶಲ್ಯವಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಆಧುನಿಕ‌ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವಂಥ ಅತ್ಯಾಧುನಿಕ ಜುವೆಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಇರುವ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಜುವೆಲ್ಲರಿ ಸಂಸ್ಥೆಗೆ ಸಲಹೆ ನೀಡಿದರು.‌

-ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸೌತ್ ಜ್ಯುವೆಲ್ಲರಿ ಷೋ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

-ಬ್ಯುಲಿಯನ್ ವಿನಿಮಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಭಾರತದ ಆಭರಣ ವ್ಯಾಪಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾದ ಸಂದರ್ಭವಿದೆ. ಗೋಲ್ಡ್ ಕಂಟ್ರೋಲ್ ಕಾಯ್ದೆ ತೆಗೆದುಹಾಕಿದ ನಂತರ ಮುಕ್ತ ವಾತಾವರಣ ನಿರ್ಮಾಣವಾಗಿದೆ. ಚಿನ್ನದ ವ್ಯಾಪಾರ ಉದ್ದಿಮೆಯಾಗಿ ಬೆಳೆದಿದೆ ಎಂದು ಅವರು ಹೇಳಿದರು.

-ಭಾರತೀಯ ಆರ್ಥಿಕತೆಯಲ್ಲಿ ಉಳಿತಾಯ ಸಂಸ್ಕೃತಿ ಇದೆ. ನಮ್ಮ ಜನರ ಉಳಿತಾಯ ಮನೋಭಾವ ಆಭರಣ ಉದ್ದಿಮೆಗೆ ಸಹಕಾರಿಯಾಗಿದೆ. ಬ್ಯಾಂಕ್ ದಿವಾಳಿಯಾದರೂ ಚಿನ್ನ ನಮ್ಮ ಆಪತ್ಭಾಂದವ ಎಂದರು.

-ಒಡವೆ ಎಂದರೆ ಒಂದು ಆತ್ಮೀಯತೆ. ಆಭರಣದ ವಹಿವಾಟು ಅಂತಃಕರಣವುಳ್ಳ ವ್ಯಾಪಾರ, ಇದು ಬಹಳ ಪುರಾತನ ವೃತ್ತಿಯಾಗಿದ್ದು ಭಾವನಾತ್ಮಕ ಸಂಬಂಧ ಬೆಸೆಯುವಂಥದ್ದು ಎಂದರು. ಆಭರಣ ಮಾಡುವ ಕಲೆ ಸೂಕ್ಷ್ಮವಾದುದು. ಆಭರಣ ತಯಾರಿ ಕರ್ನಾಟಕದ ಪಾರಂಪರಿಕ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸಬೇಕು ಎಂದರು.

-ಚಿನ್ನದ ವ್ಯಾಪಾರಿಗಳು ಸಮಾಜದ ಗೌರವ ಮತ್ತು ಬಾಂಧವ್ಯ ಕಾಪಾಡುವ ಬಂಧುಗಳು. ದೇಶಕ್ಕೆ ಆದಾಯ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಲ್ಲದೆ, 2 ನೇ ಮತ್ತು 3 ನೇ ಸ್ತರದ ನಗರಗಳಲ್ಲಿ ವ್ಯಾಪಾರ ವೃದ್ಧಿಸುವಂತೆ ತಿಳಿಸಿದರು.

-ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ.ಸವರಣ, ಗ್ಲೋಬಲ್ ಎಕ್ಸಿಬಿಷನ್ ಅಂಡ್ ಸರ್ವಿಸಸ್ ನ ಶ್ರೀಕಾಂತ್ ಉಪಸ್ಥಿತರಿದ್ದರು.

*************