ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪ್ರಸಕ್ತ ವರ್ಷ 5 ಸಾವಿರ ಶಿಕ್ಷಕರ ನೇಮಕ: ಮುಖ್ಯಮಂತ್ರಿ

know_the_cm

(ವಿಧಾನಸೌಧ, ಬೆಂಗಳೂರು), ಸೆಪ್ಟೆಂಬರ್ 05, 2021

-ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಿದ್ದರು.

-ಸಮಾರಂಭದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 5 ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದರು.

-21ನೇ ಶತಮಾನ ಜ್ಞಾನದ ಶತಮಾನ. ಜ್ಞಾನದಿಂದ ವಿಜ್ಞಾನ, ವಿಜ್ಞಾನದಿಂದ ತಂತ್ರಜ್ಞಾನದತ್ತ ಮುನ್ನಡೆದಿರುವ ದೇಶ, ಇದೀಗ ತಂತ್ರಜ್ಞಾನದಿಂದ ತಂತ್ರಾಂಶ ಜ್ಞಾನದತ್ತ ವೇಗವಾಗಿ ಸಾಗಿದೆ. ಈ ವೇಗಕ್ಕೆ ಶಿಕ್ಷಕರು ಹೊಂದಿಕೊಳ್ಳುವುದು ಅನಿವಾರ್ಯ. ಉತ್ತಮ ವಿದ್ಯಾರ್ಥಿಗಳಾದಾಗ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

-ವಿದ್ಯಾರ್ಥಿಗಳಿಗೆ ಪ್ರಶ್ನಿಸುವ ಮನೋಭಾರ ಬೆಳೆಸಲು ಪ್ರೇರೇಪಿಸಿ, ತಿಳಿದುಕೊಳ್ಳಲು ಉತ್ತೇಜನ ನೀಡುವವರೇ ನಿಜವಾದ ಗುರುಗಳು. ಮಕ್ಕಳಲ್ಲಿ ಮುಗ್ಧತೆ, ತಿಳಿದುಕೊಳ್ಳುವ ತವಕವನ್ನು ಉಳಿಸುವವರು ಅತ್ಯುತ್ತಮ ಗುರುಗಳು ಎಂದು ಅವರು ಅಭಿಪ್ರಾಯಪಟ್ಟರು.

-ವಿದ್ಯಾರ್ಥಿಗಳನ್ನು ಪರೀಕ್ಷಿಸುವಾಗ ಅದು ನಿಮ್ಮ ಪರೀಕ್ಷೆಯೂ ಹೌದು ಎಂದು ನುಡಿದರು.

-ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುತ್ತಿದ್ದು, ಶಿಕ್ಷಕರು ತಮ್ಮ ಅನಿಸಿಕೆ, ಅನುಮಾನ ವ್ಯಕ್ತಪಡಿಸಿ, ಮುಕ್ತವಾಗಿ ಚರ್ಚಿಸಿ ಮುಂದುವರೆಯೋಣ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ನೀತಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

-ಮಾಜಿ ರಾಷ್ಟ್ರಪತಿ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಸಾತ್ವಿಕತೆ, ವೈಚಾರಿಕತೆಯನ್ನು ಹೊಂದಿದ ಅಪರೂಪದ ನಾಯಕರಾಗಿದ್ದರು. ನೈತಿಕ ನಡೆಯ ಧೀಮಂತ ನಾಯಕರಾದ ರಾಧಾಕೃಷ್ಣನ್ ಅವರ ಆದರ್ಶದ ಜೀವನ ನಮಗೆ ದಾರಿದೀಪ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

-ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಬುದ್ಧಿ, ಕರುಣೆ, ಕೌಶಲ್ಯ ತರಬೇತಿಯನ್ನು ಮೈಗೂಡಿಸಿಕೊಂಡ ರಾಷ್ಟ್ರೀಯ ಶಿಕ್ಷಣ ನೀತಿ, ಭಾರತಕ್ಕೆ ಸ್ವಾಭಿಮಾನಿ, ಸ್ವಾವಲಂಬಿ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

-ಕೋವಿಡ್ ಸಂದರ್ಭದಲ್ಲಿ ಮಕ್ಕಳ ಕಲಿಕೆಗೆ ಅಡ್ಡಿಯಾಗದಂತೆ ಶ್ರಮಿಸಿದ ಹಾಗೂ ಯಶಸ್ವಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಿಕೊಟ್ಟ ಶಿಕ್ಷಕರನ್ನು ಶ್ಲಾಘಿಸಿದ ಸಚಿವರು, ಕೋವಿಡ್ ನಿಂದ ಪ್ರಾಣ ಕೊಟ್ಟ ಶಿಕ್ಷಕರನ್ನು ಸ್ಮರಿಸಿದರು.

-ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಶಾಲೆಗಳ ಅಭಿವೃದ್ಧಿಗೆ ದೇಣಿಗೆ ವರ್ಗಾವಣೆಗಾಗಿ ರೂಪಿಸಲಾದ ‘ನಮ್ಮ ಶಾಲೆ ನನ್ನ ಕೊಡುಗೆ’ ತಂತ್ರಾಂಶವನ್ನು ಉದ್ಘಾಟಿಸಿದರು. ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರದ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

*************