×
ವಿಜಯದಶಮಿಯ ಪ್ರಯುಕ್ತ ರಾಜ್ಯದ ಜನತೆಗೆ ಶುಭ ಕೋರಿದ ಮುಖ್ಯಮಂತ್ರಿ

 

ಮೈಸೂರು, ಅಕ್ಟೋಬರ್ 24, 2023: 

ಕನ್ನಡ ನಾಡಿನ ಜನರಿಗೆ ದಸರಾ ಮಹೋತ್ಸವ ವಿಜಯದಶಮಿಯ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮಳೆ ಬೆಳೆಯಾಗಿ, ರಾಜ್ಯ ಸುಭೀಕ್ಷವಾಗಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುವುದಾಗಿ ತಿಳಿಸಿದರು.

ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ವಿಜಯದಶಮಿ ಹಬ್ಬ. ಮಧ್ಯಾಹ್ನ ನಂದಿಧ್ವಜ ಪೂಜೆ ನೆರವೇರಿಸಿ, ನಂತರ ಜಂಬೂಸವಾರಿಯ ಅಂಬಾರಿ ಮೆರವಣಿಗೆ ಪ್ರಾರಂಭವಾಗಲಿದೆ. ಮೆರವಣಿಗೆ ಬನ್ನಿಮಂಟಪಕ್ಕೆ ತಲುಪಿದ ನಂತರ  ಪಂಜಿನ ಮೆರವಣಿಗೆ ರಾತ್ರಿ 8 ರವರೆಗೆ ನಡೆಯಲಿದೆ. ಮಳೆಯ ಅಭಾವ, ವಿದ್ಯುತ್ ಕೊರತೆಯಿಂದ ರೈತರಿಗೆ ತೊಂದರೆಯಾಗಿದೆ. ರಾಜ್ಯದಲ್ಲಿ ಮಳೆಯಾಗಿ, ರೈತರು ಬೆಳೆದ ಬೆಳೆಗಳು ಉಳಿಯುವಂತಾಗಲಿ ಎಂದು ಹಾರೈಸಿದರು.

**********

 

 

 

 

×
ABOUT DULT ORGANISATIONAL STRUCTURE PROJECTS