×
#6ತಿಂಗಳ_ಅನನ್ಯಸಾಧನೆ - ಮುಖ್ಯಮಂತ್ರಿ ಅವರಿಂದ ಪತ್ರಿಕಾ ಪ್ರಕಟಣೆ

ಬೆಂಗಳೂರು, ನವೆಂಬರ್ 20, 2023:

ಕಳೆದ 6 ತಿಂಗಳ ಅವಧಿಯಲ್ಲಿ ನಮ್ಮ ಸರ್ಕಾರದ ಯೋಜನೆಗಳ ಮೂಲಕ ನಾಡಿನ ಪ್ರತಿಯೊಬ್ಬರನ್ನೂ ತಲುಪುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ನಮ್ಮ ಈ ಪ್ರಯತ್ನದ ಫಲವಾಗಿ ಇಂದು ಪ್ರತಿ ಮನೆ ಮನೆಯಲ್ಲೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಕಾಣುವಂತಾಗಿರುವುದು ಅತ್ಯಂತ ಖುಷಿಯ ವಿಚಾರ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನು ಸಮಾನವಾಗಿ ಮುನ್ನಡೆಸುವ ನಮ್ಮ ಕರ್ನಾಟಕ ಮಾದರಿ ಆಡಳಿತವೆಂಬ ನವ ಕಲ್ಪನೆ ಇಂದು ಇಡೀ ದೇಶಾದ್ಯಂತ ಮನ್ನಣೆ ಗಳಿಸಿದ್ದು, ಇತರೆ ರಾಜ್ಯಗಳು ಕೂಡ ನಮ್ಮನ್ನು ಅನುಸರಿಸುತ್ತಿರುವುದು ಹೆಮ್ಮೆ ಮೂಡಿಸಿದೆ.

ಜಾತಿ, ಧರ್ಮ, ಲಿಂಗ ಬೇಧವಿಲ್ಲದೆ ಸರ್ವರನ್ನೂ ಒಳಗೊಳ್ಳುವ ಸಮಾನ ಅವಕಾಶಗಳ ಸರ್ವತೋಮುಖ ಪ್ರಗತಿಯ ನಾಡು ಕಟ್ಟುವ ನಮ್ಮ ಕಾರ್ಯಕ್ಕೆ ನಿಮ್ಮ ಬೆಂಬಲವಿರಲಿ. 

- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಕ್ತಿ ಯೋಜನೆ:

ಕಳೆದ 6 ತಿಂಗಳ ಅವಧಿಯಲ್ಲಿ ಶಕ್ತಿ ಯೋಜನೆಯಡಿ ನಾಡಿನ ಮಹಿಳೆಯರು ನಿತ್ಯ ಸರಾಸರಿ 60 ಲಕ್ಷದಂತೆ ಒಟ್ಟು 97.2 ಕೋಟಿಗೂ ಅಧಿಕ ಬಾರಿ ಉಚಿತ ಪ್ರಯಾಣ ಬೆಳೆಸಿದ್ದಾರೆ. ಈ ವರೆಗೆ ಒಟ್ಟು ರೂ. 2,303 ಕೋಟಿ ಮೊತ್ತದ ಉಚಿತ ಟಿಕೆಟ್ ವಿತರಿಸಲಾಗಿದೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಗೃಹಲಕ್ಷ್ಮಿ ಯೋಜನೆ:

ಕುಟುಂಬ ನಿರ್ವಹಣೆಯ ಹೊಣೆಹೊತ್ತ ನಾಡಿನ ಮಹಿಳೆಯರಿಗೆ ಬೆಲೆಯೇರಿಕೆಯಿಂದ ತುಸು ನೆಮ್ಮದಿ ನೀಡಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನಾವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದು, ಮಾಸಿಕ ರೂ.2,000 ಸಹಾಯಧನ ನೀಡುತ್ತಿದ್ದೇವೆ.

ಯೋಜನೆಗೆ ನೊಂದಾಯಿಸಿಕೊಂಡಿರುವ 99 ಲಕ್ಷದ 52 ಸಾವಿರ ಮಹಿಳೆಯರ ಖಾತೆಗೆ ಹಣ ಜಮೆ ಮಾಡಲಾಗಿದೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ, ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಗೃಹಜ್ಯೋತಿ ಯೋಜನೆ:

ವಿದ್ಯುತ್ ಬಿಲ್ ಹೊರೆಯಿಂದ ಕಂಗೆಟ್ಟಿದ್ದ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿ, ನೆಮ್ಮದಿಯ ಬದುಕು ಕಲ್ಪಿಸುವ ಬದ್ಧತೆಯೊಂದಿಗೆ ನಾವು ಜಾರಿಗೆ ತಂದ ಗೃಹಜ್ಯೋತಿ ಯೋಜನೆ ಇಂದು ನಾಡಿನ ಪ್ರತಿ ಮನೆಯನ್ನು ಬೆಳಗುತ್ತಿದೆ. ಈ ಯೋಜನೆಯಡಿ ರಾಜ್ಯದ ಒಟ್ಟು 1.56 ಕೋಟಿ ಕುಟುಂಬಗಳಿಗೆ ಮಾಸಿಕ ಗರಿಷ್ಠ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ವರೆಗೆ ಯೋಜನೆಗಾಗಿ ರೂ. 2,152 ಕೋಟಿ ಅನುದಾನವನ್ನು ನಮ್ಮ‌ ಸರ್ಕಾರವು ಬಿಡುಗಡೆಗೊಳಿಸಿದೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಅನ್ನಭಾಗ್ಯ ಯೋಜನೆ:

ಬಡತನ ಮತ್ತು ಹಸಿವು ಇಂದಿನ ಸಮಾಜವನ್ನು ಬಾಧಿಸುತ್ತಿರುವ ಮಾರಕ ರೋಗಗಳು. ನಾಡಿನ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯಡಿ ಬಡಕುಟುಂಬಗಳ ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ ಅಕ್ಕಿ ನೀಡುವ ಘೋಷಣೆ ಮಾಡಲಾಗಿತ್ತು.‌ 5 ಕೆ.ಜಿ ಹೆಚ್ಚುವರಿ ಅಕ್ಕಿ ಲಭ್ಯವಿಲ್ಲದೇ ಇರುವುದರಿಂದ ರೂ. 170 ಅನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಉದ್ದೇಶಕ್ಕಾಗಿ ಒಟ್ಟು ರೂ. 2,444 ಕೋಟಿ ಹಣವನ್ನು ವಿನಿಯೋಗಿಸಲಾಗಿದೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಯುವನಿಧಿ ಯೋಜನೆ:

ಶಿಕ್ಷಣ ಪೂರ್ತಿಗೊಳಿಸಿದ ಪದವೀಧರ ಯುವಜನರಿಗೆ ಉದ್ಯೋಗ ಹುಡುಕಿಕೊಳ್ಳಲು ಅಗತ್ಯ ಸಮಯ ದೊರಕಬೇಕು ಮತ್ತು ಈ ಅವಧಿಯಲ್ಲಿ ಅವರು ಹತಾಶೆ, ಒತ್ತಡಗಳಿಗೆ ಒಳಗಾಗದೆ ತಮ್ಮಿಷ್ಟದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಸಿಗಬೇಕು. ಇದು ಸಾಧ್ಯವಾಗಬೇಕಾದರೆ ನಿರುದ್ಯೋಗದಿಂದ ಎದುರಾಗುವ ಆರ್ಥಿಕ ಸಮಸ್ಯೆಗಳು ಅವರನ್ನು ಬಾಧಿಸದಂತೆ ತಡೆಯಬೇಕು. ಈ ಕಾರಣಕ್ಕಾಗಿ ನಾವು ಪದವೀಧರ ಮತ್ತು ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆಗೆ ಸರ್ಕಾರ ಜಾರಿಗೆ ಬಂದ ನಂತರದ ಮೊದಲ ಸಂಪುಟ ಸಭೆಯಲ್ಲಿಯೇ ಆಡಳಿತಾತ್ಮಕ ಅನುಮೋದನೆ ನೀಡಿದ್ದೇವೆ. ಈ ಯೋಜನೆ ಜನವರಿಯಿಂದ ಜಾರಿಗೆ ಬರಲಿದ್ದು, ಸುಮಾರು ನಾಲ್ಕೂವರೆ ಲಕ್ಷ ಯುವಜನತೆಗೆ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಅನುಗ್ರಹ ಯೋಜನೆ:

ಕೃಷಿ ಮತ್ತು ಹೈನುಗಾರಿಕೆ ಒಂದನ್ನೊಂದು ಅವಲಂಬಿಸಿಕೊಂಡಿವೆ. ಬರದಿಂದಾಗಿ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿರುವುದರಿಂದ ಸಹಜವಾಗಿಯೇ ಇದು ಹೈನುಗಾರಿಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಹೈನುಗಾರ ಕುಟುಂಬಗಳನ್ನು ಈ ಸಂಕಷ್ಟದಿಂದ ಪಾರುಮಾಡುವ ಉದ್ದೇಶದಿಂದ ಕುರಿ, ಮೇಕೆ, ಹಸು ಮುಂತಾದ ಜಾನುವಾರುಗಳು ಆಕಸ್ಮಿಕ ಮರಣಕ್ಕೆ ತುತ್ತಾದರೆ ಅದರ ಮಾಲೀಕರಿಗೆ ಆರ್ಥಿಕ ಪರಿಹಾರ ನೀಡುವ ಅನುಗ್ರಹ ಯೋಜನೆಗೆ ಮರುಚಾಲನೆ ನೀಡಲಾಗಿದೆ, ಹಾಲಿಗೆ ನೀಡುವ ಪ್ರೋತ್ಸಾಹಧನದಿಂದ 24 ಲಕ್ಷ ಹೈನುಗಾರರಿಗೆ ಅನುಕೂಲವಾಗಿದೆ, ಸಾಕುಪ್ರಾಣಿಗಳನ್ನು ಬಾಧಿಸುವ ವಿವಿಧ ಮಾರಕ ರೋಗಗಳನ್ನು ತಡೆಗಟ್ಟಲು 2.6 ಕೋಟಿಗೂ ಅಧಿಕ ಲಸಿಕೆ ಹಾಕಲಾಗಿದೆ. ಹೀಗೆ ನಾಡಿನ ಹೈನುಗಾರರ ರಕ್ಷಣೆಗೆ ನಮ್ಮ ಸರ್ಕಾರ ಕಂಕಣಬದ್ಧವಾಗಿ ಶ್ರಮಿಸುತ್ತಿದೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಕೃಷಿ ಭಾಗ್ಯ ಯೋಜನೆ:

ಪ್ರಸಕ್ತ ವರ್ಷ ನಾಡನ್ನು ತೀವ್ರತರವಾದ ಬರ ಕಾಡುತ್ತಿದ್ದು, ನೀರಿಲ್ಲದೆ ಬೆಳೆದ ಬೆಳೆ ನಷ್ಟವಾಗಿ ಅನ್ನದಾತರು ಸಂಕಷ್ಟದಲ್ಲಿ ಬದುಕು ನಡೆಸುವಂತಾಗಿದೆ. ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಕೃಷಿಭಾಗ್ಯ ಯೋಜನೆಗೆ ಮರುಚಾಲನೆ ನೀಡಲಾಗಿದೆ, 19 ಲಕ್ಷ ರೈತರಿಗೆ ರೂ. 1,500 ಕೋಟಿ ಬೆಳೆವಿಮೆ ವಿತರಿಸಲಾಗಿದೆ, 45,643 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ಅಳವಡಿಕೆ ಮಾಡಲಾಗಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮವಹಿಸಲು ಜಿಲ್ಲಾಧಿಕಾರಿಗಳ ಬ್ಯಾಂಕ್ ಖಾತೆಗೆ ಹಣದ ವರ್ಗಾವಣೆ ಮಾಡಲಾಗಿದ್ದು, ಬರದ ಸಂಕಷ್ಟದಿಂದ ರೈತರನ್ನು ಕಾಪಾಡಲು ನಮ್ಮ ಗರಿಷ್ಠ ನೆರವು ನೀಡುತ್ತಿದ್ದೇವೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಆರೋಗ್ಯ ಭಾಗ್ಯ ಯೋಜನೆ:

ಸರ್ವರಿಗೂ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂ.ಆರ್.ಐ ಸ್ಕ್ಯಾನಿಂಗ್ ಮೆಷಿನ್ ಗಳ‌ ಅಳವಡಿಕೆಗೆ ನಿರ್ಧರಿಸಲಾಗಿದೆ, ಶುಚಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಲಾಗುತ್ತಿದೆ, ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಅವರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಜಾರಿಗೆ ತರಲಾಗುತ್ತಿದೆ. ಸ್ವಸ್ಥ ಸಮಾಜ ನಮ್ಮ ಗುರಿ, ಇದಕ್ಕಾಗಿ ನಾಗರಿಕರಿಗೆ ಸಕಲ ರೀತಿಯ ವೈದ್ಯಕೀಯ ನೆರವನ್ನು ನಾವು ಖಾತ್ರಿಪಡಿಸುತ್ತೇವೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಹಸಿವುಮುಕ್ತ ಕರ್ನಾಟಕ:

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಇತರೆ 188 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಕ್ರಮವಹಿಸಲಾಗಿದೆ, ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್‌‌, ಕೆನೆಭರಿತ ಹಾಲು ಮತ್ತು ಮೊಟ್ಟೆ ವಿತರಿಸುವ ಮೂಲಕ ಹಸಿವುಮುಕ್ತ ಕರ್ನಾಟಕದತ್ತ ದಾಪುಗಾಲಿರಿಸಿದ್ದೇವೆ. ಹಸಿವು, ಅಪೌಷ್ಟಿಕತೆಗಳ ವಿರುದ್ಧದ ನಮ್ಮ ಸಮರ ನಿರಂತರವಾಗಿರಲಿದೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಶಿಕ್ಷಣ:

ಶಿಕ್ಷಿತ ಯುವ ಸಮೂಹದ ಮೂಲಕ ಸದೃಢ ಸಮಾಜ ನಿರ್ಮಾಣ ನಮ್ಮ ಗುರಿ. ಈ ಗುರಿಯ ಈಡೇರಿಕೆಗಾಗಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ವಿತರಣೆ ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ, ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ ಹೆಚ್ಚಿಸಿ ಅವರ ಉನ್ನತ ಶಿಕ್ಷಣದ ಕನಸಿಗೆ ನೆರವಾಗಿದ್ದೇವೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ಸುಗಮ ಸಂಚಾರ:

ರಾಜ್ಯದಲ್ಲಿ 1,643 ಕಿ.ಮೀ ರಾಜ್ಯ ಹೆದ್ದಾರಿ ಹಾಗೂ ಹತ್ತು ಹೊಸ ಸೇತುವೆಗಳನ್ನು ನಿರ್ಮಿಸಲಾಗಿದೆ, ಇದಕ್ಕಾಗಿ ಒಟ್ಟು ರೂ. 1,181 ಕೋಟಿ ಹಣ ವಿನಿಯೋಗಿಸಲಾಗಿದೆ. ರಾಜ್ಯದ 4 ಸಾರಿಗೆ ನಿಗಮಗಳಲ್ಲಿ 5,500 ಹೊಸ ಬಸ್ ಗಳ ಖರೀದಿಗೆ ಕ್ರಮ ವಹಿಸಲಾಗಿದ್ದು, ರಾಜ್ಯ ರಾಜಧಾನಿಯಿಂದ ಹಳ್ಳಿಯ ವರೆಗೆ ಸುಗಮ ಸಂಚಾರ - ಗುಣಮಟ್ಟದ ಸಾರಿಗೆ ಸೌಲಭ್ಯ ಒದಗಿಸಲು ನಾವು ಬದ್ಧರಿದ್ದೇವೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

ವಸತಿ:

ನಾಡಿನ ವಸತಿ ರಹಿತ ಕುಟುಂಬಗಳಿಗೆ ನೆಮ್ಮದಿಯ ಸೂರು ಒದಗಿಸುವುದು ನಮ್ಮ ಗುರಿ. ಕಳೆದ ಆರು ತಿಂಗಳ ಅವಧಿಯಲ್ಲಿ 88 ಸಾವಿರಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಡಲಾಗಿದೆ, ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕಾರ್ಯಪ್ರವೃತ್ತವಾಗಿದೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.

ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.

- ಮುಖ್ಯಮಂತ್ರಿ Siddaramaiah

#6ತಿಂಗಳ_ಅನನ್ಯಸಾಧನೆ

**********

×
ABOUT DULT ORGANISATIONAL STRUCTURE PROJECTS