ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ತರಬೇತಿ ಅಗತ್ಯವಿದೆ: ಮುಖ್ಯಮಂತ್ರಿ

know_the_cm

(ವಿಧಾನಸೌಧ, ಬೆಂಗಳೂರು), ಜನವರಿ 14, 2022

-ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

-ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

-ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು ನೀಡಲು ಬದ್ಧವಾಗಿದೆ ಎಂದು ಹೇಳಿದರು.

-72 ದೇಶಗಳ ಒಕ್ಕೂಟ ರಚನೆಯಾಗಿ ಹಲವಾರು ವಿಚಾರಗಳ ವಿನಿಮಯಕ್ಕೆ ಕಾಮನ್ವೆಲ್ತ್ ಒಕ್ಕೂಟ ವೇದಿಕೆಯಾಗಿದೆ. ಸಮಾನ ಚಿಂತನೆ ಇರುವ ರಾಷ್ಟ್ರಗಳ ಬಾಂಧವ್ಯ ಗಟ್ಟಿಗೊಳ್ಳಲು, ಅದರಲ್ಲೂ ಯುವಪೀಳಿಗೆಯಲ್ಲಿ ಬಾಂಧವ್ಯ ಮುಂದುವರೆಯಬೇಕೆಂಬ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಾರೆ. ಕ್ರೀಡಾಕೂಟದ ಬ್ಯಾಟನ್ ಇಂದು 9000 ಕಿ.ಮೀ ಪಯಣಿಸಿ ಭಾರತಕ್ಕೆ ಆಗಮಿಸಿದೆ. ಭಾರತದ ನಾಲ್ಕು ಮಹಾನಗರಗಳಿಗೆ ಬ್ಯಾಟನ್ ಸ್ವೀಕಾರ ಮಾಡುವ ಅವಕಾಶ ದೊರೆತಿದ್ದು, ಈ ಪೈಕಿ ಬೆಂಗಳೂರು ಕೂಡ ಒಂದು ಎನ್ನುವುದು ಸಂತೋಷದ ಸಂಗತಿ ನಮ್ಮ ಜವಾಬ್ದಾರಿಯನ್ನು ಮುಂದುವರೆಸುವ ಸಂಕೇತವಾಗಿರುವ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

-ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕ್ರೀಡಾ ಲೋಕಕ್ಕೆ ಹೊಸ ಚಿಂತನೆ ಹಾಗೂ ಆಯಾಮಗಳನ್ನು ನೀಡಿದ್ದಾರೆ. ಖೇಲೋ ಇಂಡಿಯಾ ಪ್ರಾರಂಭಿಸಿ ಹಳ್ಳಿ ಹಳ್ಳಿಗಳಲ್ಲಿ ವ್ಯವಸ್ಥಿತವಾಗಿ ಕ್ರೀಡಾಕೂಟಗಳು ನಡೆಯುತ್ತಿವೆ. ಜೀತೋ ಇಂಡಿಯಾ ಕಾರ್ಯಕ್ರಮ ಕ್ರೀಡಾಳುಗಳಿಗೆ ಬಹು ದೊಡ್ಡ ಸ್ಫೂರ್ತಿ ನೀಡಿದೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆಲ್ಲಲು ಭಾರತಕ್ಕೆ ಸಾಧ್ಯವಾಯಿತು. ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯವಾಗಿದ್ದು,ಭಾರತ ಸ್ವಾತಂತ್ರ್ಯ ಗಳಿಸಿದ ನಂತರದಲ್ಲಿ ಕ್ರೀಡೆಗಳಿಗೆ ಅತಿ ಹೆಚ್ಚು ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂಪಿಸಿದ್ದಾರೆ. ಕ್ರೀಡಾಪಟುಗಳು ಕ್ರೀಡಾ ಕೂಟಗಳಿಗೆ ತೆರೆಳುವ ಮುನ್ನ ಹಾಗೂ ಬಂದ ನಂತರ ಅವರೊಂದಿಗೆ ಸಮಯ ಕಳೆದು, ಪದಕ ಪಡೆಯದವರಿಗೂ ಸ್ಫೂರ್ತಿ ತುಂಬಿದ್ದಾರೆ. ಅವರ ಈ ನಡೆ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು.

-ಕರ್ನಾಟಕ ರಾಜ್ಯ ಯುವಜನ ಸಬಲೀಕರಣಕ್ಕೆ ಮಹತ್ವವನ್ನು ನೀಡಿದೆ. ನೂತನ ಯುವ ನೀತಿಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಕರ್ನಾಟಕ ಕ್ರೀಡೆಗೆ ವರದಾನವೆಂಬಂತೆ ಸ್ವತಃ ಕ್ರೀಡಾ ಪಟುವಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದೊರೆತಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದರು.

Sportspersons need Scientific training: Chief Minister

-Well qualified coaches need to provide scientific training for the sportspersons, Chief Minister Basavaraj Bommai said, participating virtually in the Commonwealth Games Baton Relay programme.

-Sportspersons need training from the best coaches. There is need for formulate a syllabus and guide them accordingly. State government is committed to provide necessary assistance to achieve the goals of Amrita Sports Project, Bommai said.

-The Commonwealth Federation comrosing 72 nations has provided the forum for exchange of views on various domains. The sporting events are being organised to strengthen the bonding among the youth. Over 6000 sports persons are taking part in this once in a 4 year event, Bommai said.

-The baton has arrived in India after traversing 9000kms. Four mega cities have been given the opportunity to receive the baton and it is happy to note thean Bengaluru is one among them, he said.

-Prime Minister Modi has given new thought and dimension to the sportingSports world. Sporting events are being held regularly under the 'Khelo India' programme. 'Jeeto India' programme has given big boost and inspiration for the sportspersons. This has enabled India to win the highest medals at the recent Tokyo Olympics. Sports need a lot of encouragement. In the post-independence era Prime Minister Modi deserves the credit for launching a maximum number of programmes to encourage sports. He has interacted with sportspersons before heading for major sporting events and after their return. He has inspired those who won the medals. This has been a model for us all, Bommai said.

-State government has given importance for empowerment of the youth. A new Youth Policy is being formulated. It is like a boon for sports in Karnataka as a sportsperson himself is our Governor, Thavar Chand Gehlot. It is commendable that the Karnataka Olympics Association has been giving a big boost for sports, Bommai said.

*************