ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ: ಮುಖ್ಯಮಂತ್ರಿ

know_the_cm

(ದಾವಣಗೆರ), ಸೆಪ್ಟೆಂಬರ್ 19, 2021

-ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

-ದಾವಣಗೆರೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗಳಿಗೆ ಶಿಲ್ಯಾನ್ಯಾಸ ನೆರವೇರಿಸಿ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದರು.

-ಪಿಎಲ್ ಐ ಯೋಜನೆಯಡಿ ಕೇಂದ್ರ ಸರ್ಕಾರ ಜವಳಿ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಉದ್ದೇಶಿಸಿದೆ. ಉದ್ಯೋಗ ಸೃಷ್ಟಿಸುವ ಶ್ರೇಷ್ಟ ಯೋಜನೆ ಇದಾಗಿದೆ. ಈ ನಿಟ್ಟಿನಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ಮತ್ತು ಆಟೋಮೊಬೈಲ್ ಸೆಕ್ಟರ್ ಗಳ ಕ್ಲಸ್ಟರ್ ಗಳನ್ನು ಮಾಡಲಾಗುವುದು. ರಾಜ್ಯಕ್ಕೆ ಕನಿಷ್ಟ ಮೂರು ಟೆಕ್ಸ್ಟೈಲ್ ಪಾರ್ಕ್ ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು.

-ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇಡೀ ರಾಜ್ಯದಲ್ಲಿ ಈ ಯೋಜನೆಯಡಿ ಒಟ್ಟು 1500 ಕೋಟಿ ರೂ.ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯೊಂದಿಗೆ ಈ ಯೋಜನೆಯೂ ಸೇರಿ ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

-ಅಮೃತ ಗ್ರಾಮ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಪ್ರತಿಯೊಂದು ಗ್ರಾಮ ಪಂಚಾಯತಿಗೂ ಗ್ರಾಮಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ 25 ಲಕ್ಷ ರೂ.ಗಳನ್ನು ಹೆಚ್ಚುವರಿಯಾಗಿ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

-ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ರೇಷ್ಮೆ ಕೃಷಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕರ್ನಾಟಕದ ರೇಷ್ಮೆ ಬೆಳೆ ಶ್ರೇಷ್ಠ ಗುಣಮಟ್ಟದ್ದಾಗಿದ್ದು ವಿದೇಶದಿಂದ ಆಮದಾಗುವ ರೇಷ್ಮೆಯ ಗುಣಮಟ್ಟಕ್ಕೆ ಸರಿಸಮಾನವಾಗಿದೆ. ರೇಷ್ಮೆ ಬೆಳೆ ಪ್ರಮುಖವಾಗಿರುವ 8 -10 ಜಿಲ್ಲೆಗಳಲ್ಲಿ ರೇಷ್ಮೆ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೊಳಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು.

-ಸಮಾರಂಭದಲ್ಲಿ ಜಿಲ್ಲಾಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಲೋಕಸಭಾ ಸದಸ್ಯ ಜಿ.ಎಂ.ಸಿದ್ಧೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್ ಮತ್ತಿತರು ಉಪಸ್ಥಿತರಿದ್ದರು.

*************