ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಯಾವ ಧರ್ಮವೂ ಹಿಂಸೆಯನ್ನು ಪ್ರಚೋದಿಸುವುದಿಲ್ಲ: ಮುಖ್ಯಮಂತ್ರಿ

know_the_cm

(ಬೆಂಗಳೂರು), ನವೆಂಬರ್ 21, 2022

-ಯಾವ ಧರ್ಮವೂ ಹಿಂಸೆಯನ್ನು ಪ್ರಚೋದಿಸುವುದಿಲ್ಲ. ದೇಶದಲ್ಲಿ ಶಾಂತಿ ಕದಡುವ ಯಾವುದೇ ಶಕ್ತಿಯನ್ನು ಯಾರೂ ಬೆಂಬಲಿಸಬಾರದು. ಎಲ್ಲರೂ ಒಟ್ಟಾಗಿ ದೇಶ ಕಟ್ಟುವ ಕೆಲಸ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

-ಅವರು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ಉರ್ದು ಅಕಾಡೆಮಿ ಇದರ ನೂತನ ಕಛೇರಿಗಳ ಸಂಕೀರ್ಣ “ *ಕೆ.ಎಂ.ಡಿ.ಸಿ. ಭವನ”ದ ಉದ್ಘಾಟಿಸಿ ಮಾತನಾಡಿದರು.

-ಭಾರತದಲ್ಲಿ ಅನೇಕ ಧರ್ಮಗಳು ಹುಟ್ಟಿವೆ. ಎಲ್ಲರೂ ಮೊದಲು ನಮ್ಮ ದೇಶವನ್ನು ಪ್ರೀತಿಸೋಣ. ಎಲ್ಲರೂ ಮಾತೃಭೂಮಿಯನ್ನು ಪೂಜಿಸಬೇಕು. ಶಿಕ್ಷಣ, ಉದ್ಯೋಗ, ಸಬಲೀಕರಣ ವನ್ನು ಸಾಧಿಸಲು ಅಲ್ಪಸಂಖ್ಯಾತರು ಸಂಘಟಿತರಾಗಬೇಕು. ದೇಶದ್ರೋಹದ ಕೃತ್ಯಗಳಿಗೆ ಯಾರೂ ಬೆಂಬಲ ನೀಡಬಾರದು ಮತ್ತು ಅಂತಹ ಕಿಡಿಗೇಡಿಗಳ ವಿರುದ್ಧ ಎದ್ದುನಿಲ್ಲಬೇಕೆಂದು ಅಲ್ಪಸಂಖ್ಯಾತರಿಗೆ ಕರೆ ನೀಡಿದರು. ಆಗ ಮಾತ್ರ ಸಮಾಜದಲ್ಲಿ ಸೌಹಾರ್ದತೆ ಬೆಳೆಯಲು ಸಾಧ್ಯ ಎಂದರು. ನನ್ನ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ನನಗೆ ಪ್ರಾರ್ಥನೆ ಮಾಡಿ ಎಂದು ತಿಳಿಸಿದರು.

ಸಮುದಾಯದವರ ಚಿಂತನೆ ಬದಲಾಗಬೇಕು:

-ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಣ್ಣುಮಕ್ಕಳು ಬುದ್ಧಿವಂತರಿದ್ದಾರೆ. ಸಮುದಾಯದಲ್ಲಿ ಹೆಚ್ಚು ಜನ ಶಿಕ್ಷಣ ಪಡೆಯುತ್ತಿದ್ದಾರೆ. 21 ನೇ ಶತಮಾನ ಜ್ಞಾನದ ಶತಮಾನ. ಅಲ್ಪ ಸಂಖ್ಯಾತರನ್ನು ಕತ್ತಲಲ್ಲಿ ಇಡಲಾಗಿದೆ. ಸಮುದಾಯದವರ ಚಿಂತನೆ ಬದಲಾಗಬೇಕು. ನಾನು ಹೇಳೊದು ಕೆಲವರಿಗೆ ಇಷ್ಟ ಆಗೋದಿಲ್ಲ. ಅಲ್ಪ ಸಂಖ್ಯಾತ ಮಕ್ಕಳ ಕೈಯಲ್ಲಿ ಪೆನ್ನು ಪೆನ್ಸಿಲ್ ಇರಬೇಕೊ ಅವರ ಕೈಯಲ್ಲಿ ಪಾನಾ ಪಕ್ಕಡ್ ಇದೆ. ಬೆನ್ನ ಮೇಲೆ ಸ್ಕೂಲ್ ಬ್ಯಾಗ್ ಇರಬೇಕೊ ಅವರ ಬೆನ್ನಮೇಲೆ ಜೋಳ, ಅಕ್ಕಿಯ ಚೀಲ‌ಇದೆ‌ ಅವರಿಗೆ ಓದುವ ಹಕ್ಕಿದೆ. ಈ ಬಗ್ಗೆ ಹಿಂದಿನ ಸರ್ಕಾರಗಳು ಏಕೆ ಯೋಚನೆ ಮಾಡಲಿಲ್ಲ ಎಂದರು.

-ಅಬ್ದುಲ್ ಅಜೀಂ ಅತ್ಯುತ್ತಮ ಅಧಿಕಾರಿಯಾಗಿದ್ದರು. ಅವರಂತೆ ಇಂದಿನ ಮಕ್ಕಳು ಯಶಸ್ವಿಯಾಗಬೇಕು. ನಮ್ಮ ಸರ್ಕಾರದ ಬಗ್ಗೆ ಆರೋಪ ಮಾಡುತ್ತಾರೆ. ನನ್ನ ಆರ್ಥಿಕ ಕಾರ್ಯದರ್ಶಿ ಶ್ರೀ ಜಾಫರ್ ಹಾಗೂ ಕೊವಿಡ್ ಸಂದರ್ಭದಲ್ಲಿ ಶ್ರಮವಹಿಸಿದ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ಶ್ರೀ ಜಾವೇದ್ ಅಖ್ತರ್ ಅಲ್ಪಸಂಖ್ಯಾತರು. ಈಗ ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿರ್ವಹಿಸಲು ವಿಶೇಷ ಆಯುಕ್ತರ ಹುದ್ದೆಗೆ ಶ್ರೀ ಸಲೀಂ ಅವರನ್ನು ನೇಮಕ ಮಾಡಲಾಗಿದೆ ಎಂದರು.

know_the_cm

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 1460 ಕೋಟಿ ರೂ:

-ವಿದೇಶದಲ್ಲಿ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ‌, ಐಎಎಸ್ ಕೆಎಎಸ್ ತರಬೇತಿ ನಿಲ್ಲಿಸಲಾಗಿತ್ತು.ಅದನ್ನು ಪುನ: ಪ್ರಾರಂಭಿಸಲಾಗಿದೆ. ನಮ್ಮ ಸರ್ಕಾರ ಮೌಲಾನಾ ಆಜಾದ್ ಶಾಲೆ, 30 ಕ್ಕಿಂತ ಹೆಚ್ಚು ಸಿಬಿಎಸ್ ಸಿ ಕಲಿಸುವ ಅಬ್ದುಲ್ ಕಲಾಂ ಶಾಲೆಗಳು ಕರ್ನಾಟಕದಲ್ಲಿ ಯಶಸ್ವಿಯಾಗುತ್ತಿದೆ. ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ವೇತನ ಗಳನ್ನು ಡಿಬಿಟಿ ಮೂಲಕ ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಶಾಲೆಗಳಿಗೆ 624 ಶಿಕ್ಷಕರನ್ನು ನಮ್ಮ ಸರ್ಕಾರ ನೇಮಕ ಮಾಡಿದೆ. ಈ ವರ್ಷ ಹಾಸ್ಟೆಲ್ ಗಳಲ್ಲಿ 2500 ಮಕ್ಕಳು ಹೆಚ್ಚುವರಿಯಾಗಿ ಸೇರಿಸಿಕೊಳ್ಳಲಾಗಿದೆ.1460 ಕೋಟಿ ರೂ. ಅನುದಾನವನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿದೆ ಎಂದರು.

ವಕ್ಪ್ ಆಸ್ತಿ ರಕ್ಷಣೆ:

-ವಕ್ಪ್ ಆಸ್ತಿ ವಶಪಡಿಸಿಕೊಳ್ಳುವವರೆಗೂ ವಕ್ಪ ಅಧ್ಯಕ್ಷರು ಕ್ರಮ ಕೈಗೊಳ್ಳಬೇಕು. ದೇವರ ಆಸ್ತಿ ಉಳಿಸುವ ಅವಕಾಶ ವಕ್ಪ್ ಅಧ್ಯಕ್ಷರಿಗೆ ಸಿಕ್ಕಿದೆ. ದೇವರ ಕೆಲಸ ಮಾಡಿ. ರಾಜ್ಯದಲ್ಲಿ 2500 ಎಕರೆ ವಕ್ಪ್ ಅಸ್ತಿ ಖಾಸಗಿಯವರಿಂದ ಕಬಳಿಕೆಯಾಗಿದೆ. ಅದನ್ನು ವಶಪಡಿಸಿಕೊಳ್ಳಲು ಸಮುದಾಯ ನಿಲ್ಲಬೇಕು. ನಿಮ್ಮ ಜೊತೆಗೆ ಸರ್ಕಾರವಿದೆ. ವಕ್ಫ್ ಮಂಡಳಿ ಮುಸ್ಲಿಂ ಸಮುದಾಯದ ಹಕ್ಕುಗಳ ರಕ್ಷಣೆಗೆ ಬದ್ಧರಾಗಿರಬೇಕು ಎಂದರು.

-ಕ್ರಿಶ್ಚಿಯನ್ ಧರ್ಮ ಪ್ರಗತಿಪರ ಧರ್ಮ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರತಿ ಭಾನುವಾರ ಪ್ರಾರ್ಥಿಸುತ್ತಾರೆ. ಅವರ ಜೊತೆಗೂ ನನಗೆ ಒಳ್ಳೆಯ ಸಂಬಂಧ ಇದೆ. ಜೈನಧರ್ಮದ ಮಹಾವೀರರು ತ್ಯಾಗಮೂರ್ತಿಯಾಗಿದ್ದರು.ಶಾಂತಿ, ಅಹಿಂಸೆಯನ್ನು ಪ್ರತಿಪಾದಿಸಿರು ಎಂದು ತಿಳಿಸಿದರು.

No religion instigates violence: Chief Minister

(Bengaluru), November 21, 2022

-No religion will instigate violence and none of them must support any force which will try to disturb peace in the country. Everyone must unite and get into the nation building activities, said Chief Minister Basavaraj Bommai.

-Speaking after the new office complex 'Karnataka Minority Development Corporation' with offices of Karnataka Minority Development Corporation, Karnataka State Minorities Commission and Urdu Academy here on Monday, he said many religions have taken birth in India. First, all of them must love their country and pray for Mother Earth. The minorities must unite to achieve success in education, employment and empowerment. "No one must support or back anti-national activities, and the community must rise against such miscreants. Then only it will be possible to promote cordiality in society. In my constituency the minorities are in large numbers and they pray for me".

Thinking must change:

-He said there are a good number of intelligent female students in the minority community. In fact, more people are getting education. The 21st century is the century of knowledge but the minorities are kept in the dark. But the thinking of the community must change. "What I will say may not be liked by some people. The kids who are supposed to hold pens and pencils are holding the cutting player and spanner. In the place of school bags they are carrying the jawar or rice sack. Everyone has the right to education but why did the previous governments not think about it"?

-Bommai said Abdul Azim was a good officer and the present day kids must become successful like Azim. Allegations are made against his government. His finance secretary Jaffer and Secretary, Health Department, Jawaid Akthar who worked hard during Covid-19 pandemic, are minorities. Now, M.A.Salim has been appointed as the special commissioner of traffic to manage the density of traffic in Bengaluru.

Rs 1460 crore for Minorities Development Corporation:

-He said scholarship for higher studies abroad and IAS/KAS Coaching which was stopped, has resumed. The Moulana Azad Schools and over 30 CBSE syllabus Abdul Kalam Schools are running successfully. The scholarship for students studying in these schools is made through DBT. As many as 624 teachers are appointed for the minority schools. This year, an additional 2500 students are accommodated in hostels. A Rs 1460 crore grant has been given for Minorities Development Corporation.

Protection of Wakf property:

-Bommai said till the wakf properties are confiscated, the wakf chairman must take action. The wakf chairman has got an opportunity to save 'god's property'. Large number of wakf properties are encroached upon and the community must stand with the government for its confiscation. The Wakf Board must be ready to protect interest of the Muslim community.

-He said the Christianity is a progressive religion and they hold prayers on every Sunday for the well-being of everyone. Likewise, Lord Mahaveera was a symbol of sacrifice, and propagated peace and non-violence. "I have a good relationship with both these communities".

know_the_cm

*************