ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಗಡಿ ವಿವಾದ- ರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತರಾಗಿದ್ದೇವೆ: ಮುಖ್ಯಮಂತ್ರಿ

know_the_cm

(ಬೆಂಗಳೂರು), ನವೆಂಬರ್ 21, 2022

-ಗಡಿವಿವಾದಗಳನ್ನು ಬಗೆಹರಿಸಲು ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

-ತಮ್ಮ ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿವಿವಾದದ ಬಗ್ಗೆ ಇಂದು ಸಭೆ ನಡೆಸಲಾಗಿದೆ. ತಂಡವು ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಕರ್ನಾಟಕದ ಹಿರಿಯ ವಕೀಲರಾದ ಉದಯ್ ಹೊಳ್ಳ, ಬೆಳಗಾವಿಯ ಮಾರುತಿ ಜಿರ್ಲೆ, ವಕೀಲರಾದ ರಘುಪತಿ ಅವರನ್ನೊಳಗೊಂಡಿದೆ ಎಂದರು.

-ವಕೀಲರ ತಂಡವು ಈಗಾಗಲೇ 2-3 ಬಾರಿ ಸಭೆ ಸೇರಿ ವಿಷಯಗಳ ಬಗ್ಗೆ ಏನು ವಾದ ಮಾಡಬೇಕೆಂದು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಸಂಜೆ ಈ ವಕೀಲರೊಂದಿಗೆ ವೀಡಿಯೋ ಸಂವಾದ ನಡೆಸುತ್ತಿದ್ದು, ಈ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕರಿಗೆ ಹಾಗೂ ಎಲ್ಲಾ ಪಕ್ಷದ ನಾಯಕರಿಗೆ ಈಗಾಗಲೇ ಪತ್ರವನ್ನು ನಾಳೆ ಬೆಳಿಗ್ಗೆ ಕಳಿಸಿಕೊಡಲಾಗುತ್ತಿದೆ. ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದರು.

-ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿಗೆ ಮಾನ್ಯತೆ ದೊರಕಿಲ್ಲ. ಮೆಂಟೇನಬಿಲಿಟಿ ಈವರೆಗೆ ಸಿಕ್ಕಿಲ್ಲ. ಸಿಗುವುದೂ ಇಲ್ಲ. ಮೆಂಟೇನಬಿಲಿಟಿ ಆಗಬೇಕೋ ಬೇಡವೋ ಎನ್ನುವ ಬಗ್ಗೆಯೇ ಇನ್ನೂ ಚರ್ಚೆಯಾಗುತ್ತಿದೆ. ಮುಖ್ಯ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯ ಇನ್ನೂ ಪರಿಗಣಿಸಿಲ್ಲ.ಮೆಂಟೇನಬಿಲಿಟಿ ಆಗುವುದಿಲ್ಲ, ಇದನ್ನು ಪರಿಗಣಿಸಬಾರದು ಎಂದು ವಾದಿಸಲು ನಾವು ಸಿದ್ಧರಿದ್ದೇವೆ. ಸಂವಿಧಾನ ಬದ್ಧವಾಗಿ 3 ನೇ ಕಲಂ ಪ್ರಕಾರ ರಾಜ್ಯ ಪುನರ್ ವಿಂಗಡನಾ ಕಾಯ್ದೆ ರಚನೆಯಾಯಿತು. ಕಾಯ್ದೆಯ ಪ್ರಕಾರ ಆಗಿದ್ದನ್ನು ಪುನರ್ ಪರಿಶೀಲನೇ ಮಾಡಿದ ಉದಾಹರಣೆ ಇಲ್ಲ ಹಾಗೂ ಅಂಥ ಸಂದರ್ಭವೂ ಒದಗಿಬಂದಿಲ್ಲ ಎಂದರು.

ಕಾಯ್ದೆಯಲ್ಲಿ ಬದಲಾವಣೆ ಮಾಡುವ ಹಕ್ಕು ಯಾರಿಗೂ ಇಲ್ಲ:

-ಮಹಾರಾಷ್ಟ್ರದಲ್ಲಿ ಗಡಿ ವಿವಾದವೇ ರಾಜಕೀಯ ವಸ್ತುವಾಗಿದೆ. ಯಾವುದೇ ಪಕ್ಷದ ಸರ್ಕಾರವಿದ್ದರೂ ಎಲ್ಲಾ ಪಕ್ಷಗಳು ಕೂಡ ತಮ್ಮ ರಾಜಕೀಯ ಕಾರಣಕ್ಕಾಗಿ ಇದನ್ನು ಎತ್ತುವ ಕೆಲಸ ಮಾಡುತ್ತಿದ್ದಾರೆ. ಈವರೆಗೂ ಅವರು ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ಕರ್ನಾಟಕದ ಗಡಿ ರಕ್ಷಣೆ ಮಾಡಲು ಎಲ್ಲಾ ರೀತಿಯಲ್ಲಿ ಸಶಕ್ತರಾಗಿದ್ದೇವೆ. ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕನ್ನಡ ನಾಡು, ನುಡಿ, ನೀರಿನ ಬಗ್ಗೆ ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನಾವು ಒಂದಾಗಿ ಹೋರಾಟ ಮಾಡುವ ತೀರ್ಮಾನ ಮಾಡಿದ್ದೇವೆ. ನ್ಯಾಯ ನಮ್ಮ ಪರವಾಗಿದೆ. ರಾಜ್ಯ ಪುನರ್ ವಿಂಗಡನಾ ಕಾಯ್ದೆಯಲ್ಲಿ ಬದಲಾವಣೆ ಮಾಡುವ ಹಕ್ಕು ಯಾರಿಗೂ ಇಲ್ಲ. ಕನ್ನಡದ ಗಡಿ ರಕ್ಷಣೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

Border row- Capable to protect state's border:Chief Minister

(Bengaluru), November 21, 2022

-A strong team of advocates has been formed to resolve all the boundary issues, said Chief Minister Basavaraj Bommai.

-Talking to reporters here on Monday, he said a meeting regarding the border issue was held in which a senior team of advocates, Mukul Rohtagi, Shyam Diwan, Karnataka's Uday Holla, Belagavi's Maruti Jirle and Raghupathy attended. The team has met two to three times and decided what should be their line of argument in the border row. "I will be holding a video conference with the advocates team on Tuesday. Letters will be sent to Leaders of Opposition in both the Houses regarding the steps taken by the government in this regard. We are fully prepared to argue our case in the Supreme Court".

-The CM said the application filed by the Maharashtra Government has not been considered and so far it has not got its maintainability and it may not get also. Discussion is going on regarding its maintainability. The apex court has not considered the main case and it may not be maintainable. The Government of Karnataka will argue not to consider the application filed by the Maharashtra State. The Reorganisation of States Act was formed as per Column 3 of the Constitution, and there are no examples of reviewing it as such a situation has not arisen.

No right to change Act:

-Bommai said the border row has become a political tool in Maharashtra and any party which is in power will raise this issue for political purposes. But they have not been successful yet and in the future also. "We are capable of protecting the borders of karnataka and have taken steps also. We have worked together when it comes to land, language and water of Karnataka and have fought jointly. No one has the right to change the Reorganisation of States Act".

*************